ಮುತ್ತು ಉದಕದಲಾಗದು, ಉದಕ ಮುತ್ತಿನೊಲಾಗದು, ತತ್ತ್ವಘಟಿಸಿದ ಸುಮುಹೂರ್ತದಲಲ್ಲದೆ. ಚಿತ್ತವೇದ್ಯವಾಗದು ಸದ್ಗುರುವಿನ ಕರುಣಕಲ್ಲದೆ, ಕರ್ತೃ ಕೂಡಲಸಂಗಮದೇವರ ಒಲವಿನ ದಯದ ಚಿತ್ತವಿಡಿದಂಗಲ್ಲದೆ ಶಿವತತ್ತ್ವ ಸಾಹಿತ್ಯವಾಗದು.