Links

Sunday, June 30, 2019

Giriya shikharada mele

ಗಿರಿಯ ಶಿಖರದ ಮೇಲೆ ಕುಳಿತುಕೊಂಡು ಜಡೆಯನೇರಿಸಿಕೊಂಡು ಹುತ್ತೇರಿ ಹಾವು ಸುತ್ತಿರ್ದಡೇನಯ್ಯಾ? 
ಕೃತಯುಗ ತ್ರೇತಾಯುಗ ದ್ವಾಪರ ಕಲಿಯುಗದೊಡನೊಡನೆ ಸವೆದ ಪಾಷಾಣ! 
ನಮ್ಮ ಕೂಡಲಸಂಗನ ಶರಣರ ಪ್ರಸಾದ ಜೀವಿಗಳಲ್ಲದವರು ಏಸು ಕಾಲವಿರ್ದಡೆನು ಅದರಂತು ಕಾಣಿರಣ್ಣಾ

Aragu tindu karaguva

ಅರಗು ತಿಂದು ಕರಗುವ ದೈವವನೆಂತು ಸರಿಯೆಂಬೆನಯ್ಯಾ
ಉರಿಯ ಕಂಡಡೆ ಮುರುಟುವ ದೈವವನೆಂತು ಸರಿಯೆಂಬೆನಯ್ಯಾ
ಅವಸರ ಬಂದಡೆ ಮಾರುವ ದೈವವನೆಂತು ಸರಿಯೆಂಬೆನಯ್ಯಾ
ಅಂಜಿಕೆಯಾದಡೆ ಹೂಳುವ ದೈವವನೆಂತು ಸರಿಯೆಂಬೆನಯ್ಯಾ
 ಸಹಜಭಾವ ನಿಜೈಕ್ಯ ಕೂಡಲಸಂಗಮದೇವನೊಬ್ಬನೆ ದೇವ

Jambu dweepa

ಜಂಬೂದ್ವೀಪನವಖಂಡಪೃಥ್ವಿಯೊಳಗೆ 
ಕೇಳಿರಯ್ಯ ಎರಡಾಳಿನ ಭಾಷೆಯ 
ಕೊಲುವೆನೆಂಬ ಭಾಷೆ ದೇವನದು 
ಗೆಲುವೆನೆಂಬ ಭಾಷೆ ಭಕ್ತನದು
ಸತ್ಯವೆಂಬ ಕೂರಲಗನೆ ಕಳೆದುಕೊಂಡು ಸದ್ಭಕ್ತರು ಗೆದ್ದರು ಕಾಣಾ
 ಕೂಡಲಸಂಗಮದೇವ