ಕಿವಿಯ ಸೂತಕ ಹೋಯಿತ್ತು
ಸದ್ಗುರುವಿನ ವಚನದಿಂದ
ಕಂಗಳ ಸೂತಕ ಹೋಯಿತ್ತು
ಸದ್ಭಕ್ತರ ಕಂಡೆನಾಗಿ
ಕಾಯದ ಸೂತಕ ಹೋಯಿತ್ತು
ನಿಮ್ಮ ಚರಣವ ಮುಟ್ಟಿದೆನಾಗಿ
ಬಾಯ ಸೂತಕ ಹೋಯಿತ್ತು
ನಿಮ್ಮ ಒಕ್ಕುದ ಕೊಂಡೆನಾಗಿ
ನಾನಾ ಸೂತಕ ಹೋಯಿತ್ತು
ನಿಮ್ಮ ಶರಣರನುಭಾವಿಯಾಗಿ
ಕೂಡಲಸಂಗಮದೇವ ಕೇಳಯ್ಯ
ಎನ್ನ ಮನದ ಸೂತಕ ಹೋಯಿತ್ತು
ನೀವಲ್ಲದಿಲ್ಲೆಂದರಿದೆನಾಗಿ
No comments:
Post a Comment