ಎನಗೆ ನಿಮ್ಮ ನೆನಹಾದಾಗ ಉದಯ
ಎನಗೆ ನಿಮ್ಮ ಮರಹಾದಾಗ ಅಸ್ತಮಾನ
ಎನಗೆ ನಿಮ್ಮ ನೆನಹವೆ ಜೀವನ
ಎನಗೆ ನಿಮ್ಮ ನೆನಹವೆ ಪ್ರಾಣ ಕಾಣಾ ತಂದೆ
ಸ್ವಾಮಿ ಎನ್ನ ಹೃದಯದಲ್ಲಿ ನಿಮ್ಮ ಚರಣದುಂಡಿಗೆಯನೊತ್ತಯ್ಯಾ
ವದನದಲಿ ಷಡಕ್ಷರಿಯ ಬರೆಯಯ್ಯಾ ಕೂಡಲಸಂಗಮದೇವಾ
Saturday, June 16, 2018
Enage nimma nenahaadaga udaya
Friday, June 15, 2018
Sutradhaari manada mailigeya
ಸೂತ್ರಧಾರಿ ಮನದ ಮೈಲಿಗೆಯ ಕಳೆಯಬಂದನಯ್ಯಾ ಮಡಿವಾಳನು.
ಎನ್ನ ಕಾಯದ ಮೈಲಿಗೆಯ ತಂದು ತನ್ನ ಮುಂದೆ ಇರಿಸಿದೆಡೆ
ಸಮತೆಯೆಂಬ ಕೂಪತೋಹಿನಲ್ಲಿ ಅದ್ದಿ, ಕಟ್ಟಿ ಹಿಳಿದನಯ್ಯಾ.
ಪಂಚೇಂದ್ರಿಯವರ್ಗಂಗಳ ಜ್ಞಾನವೆಂಬ ನಿರ್ಮಲಜಲದಲ್ಲಿ
ಅಲುಬಿ ಸೆಳೆದನಯ್ಯಾ.
ರವಿಶಶಿಶಿಖಿಯ ತೇಜದಲ್ಲಿ ಆರಿಸಿದನು,
ಚತುರ್ದಶ ಷೋಡಶವೆಂಬ ಘಳಿಗೆಯ ಮಾಡಿದನು.
ಸಮಾಧಾನವೆಂಬ ಅಡ್ಡೆಯ ಮೇಲಿರಿಸಿ ಸಮಗುಣವೆಂಬ
ಕೊಡತಿಯಲ್ಲಿ ಘಟ್ಟಿಸಿದನು.
ಹರಿಯಿತ್ತಯ್ಯಾ ಸೆರಗು ಮೂರಾಗಿ.
ಆ ಮೂರರಿವೆಯ ಕೊಟ್ಟನಯ್ಯಾ, ಎನ್ನ ಕೈಯಲ್ಲಿ,
ಆ ಅರಿವೆಯ ಗುರುವಿಂಗೊಂದ ಕೊಟ್ಟೆನು,
ಲಿಂಗಕ್ಕೊಂದ ಕೊಟ್ಟೆನು, ಜಂಗಮಕ್ಕೊಂದ ಕೊಟ್ಟೆನು.
ಎನಗೆ ಕೊಟ್ಟ ಮೂರರಿವೆಯನೂ
ಒಂದುಮಾಡಿ
ಹೊದೆದುಕೊಂಡು ನಿಶ್ಚಿಂತನಾಗಿ,
ಮಡಿವಾಳನ ಕೃಪೆಯಿಂದಲಾನು ಬದುಕಿದೆನು
ಕಾಣಾ, ಕೂಡಲಸಂಗಮದೇವಾ.
Saturday, May 19, 2018
PuNya paapavemba
ಪುಣ್ಯ ಪಾಪವೆಂಬ ಉಭಯ ಕರ್ಮವನಾರು ಬಲ್ಲರಯ್ಯಾ ? ಇವನಾರುಂಬರು !
ಕಾಯ ತಾನುಂಬಡೆ ಕಾಯ ತಾ ಮಣ್ಣು
ಜೀವ ತಾನುಂಬಡೆ ಜೀವ ತಾ ಬಯಲು
ಈ ಉಭಯ ನಿರ್ಣಯವ ಕೂಡಲಸಂಗಮದೇವಾ ನಿಮ್ಮ ಶರಣ ಬಲ್ಲ
Sunday, April 8, 2018
Sharanu nidre
ಶರಣ ನಿದ್ರೆಗೈದಡೆ ಜಪ ಕಾಣಿರೊ
ಶರಣೆದ್ದು ಕುಳಿತೆಡೆ ಶಿವರಾತ್ರಿ ಕಾಣಿರೊ
ಶರಣ ನಡೆದುದೆ ಪಾವನ ಕಾಣಿರೊ
ಶರಣ ನುಡಿದುದೆ ಶಿವತತ್ಪ ಕಾಣಿರೊ
ಕೂಡಲಸಂಗನ ಶರಣನ ಕಾಯವೇ ಕೈಲಾಸ ಕಾಣಿರೊ
Saturday, December 2, 2017
kALiya kaN kANadinda munna
kALiya kaN kANadinda munna, tripura sanhAradinda munna, harivira.ncigaLinda munna, umeya kaLyANadinda munna, munna, munna, munna, andingeLeya nInu, haLeya nAnu mahAdAni kUDalasangamadEvA.Kannada:ಕಾಳಿಯ ಕಣ್ ಕಾಣದಿಂದ ಮುನ್ನ, ತ್ರಿಪುರ ಸಂಹಾರದಿಂದ ಮುನ್ನ, ಹರಿವಿರಂಚಿಗಳಿಂದ ಮುನ್ನ, ಉಮೆಯ ಕಳ್ಯಾಣದಿಂದ ಮುನ್ನ, ಮುನ್ನ, ಮುನ್ನ, ಮುನ್ನ, ಅಂದಿಂಗೆಳೆಯ ನೀನು, ಹಳೆಯ ನಾನು ಮಹಾದಾನಿ ಕೂಡಲಸಂಗಮದೇವಾ.
udakadolage baChittu
ಉದಕದೊಳಗೆ ಬಚ್ಚಿಟ್ಟ ಬಯ್ಕೆಯ ಕಿಚ್ಚಿನಂತಿದ್ದಿತ್ತು,
ಸಸಿಯೊಳಗಣ ರಸದ ರುಚಿಯಂತಿದ್ದಿತ್ತು,
ನನೆಯೊಳಗಣ ಪರಿಮಳದಂತಿದ್ದಿತ್ತು,
ನಿಮ್ಮ ನಿಲುವು ಕೂಡಲಸಂಗಮದೇವಾ,
ಕನ್ಯೆಯ ಸ್ನೇಹದಂತಿದ್ದಿತ್ತು.