ಕಾಗೆ ಒಂದಗುಳ ಕಂಡಡೆ ಕರೆಯದೆ ತನ್ನ ಬಳಗವನು
ಕೋಳಿ ಒಂದು ಕುಟುಕ ಕಂಡಡೆ ಕೂಗಿ ಕರೆಯದೆ ತನ್ನ ಕುಲವನೆಲ್ಲವ
ಶಿವಭಕ್ತನಾಗಿ ಭಕ್ತಿಪಕ್ಷವಿಲ್ಲದಿದ್ದಡೆ ಕಾಗೆ ಕೋಳಿಂದ ಕರಕಷ್ಟ ಕೂಡಲಸಂಗಮದೇವಾ
Saturday, June 16, 2018
Kaage ondaguLa kanDaDe
Japatala nitya nemavenagupadesha
ಜಪತಪ ನಿತ್ಯನೇಮವೆನಗುಪದೇಶ
ನಿಮ್ಮ ನಾಮವೆನಗೆ ಮಂತ್ರ
ಶಿವನಾಮವೆನಗೆ ತಂತ್ರ
ಕೂಡಲಸಂಗಮದೇವಯ್ಯಾ ನಿಮ್ಮ ನಾಮವೆನಗೆ ಕಾಮಧೇನು
Veda naDanaDugithu
ವೇದ ನಡನಡುಗಿತ್ತು, ಶಾಸ್ತ್ರವಗಲಿ ಕೆಲಕ್ಕೆ ಸಾರಿದ್ದಿತಯ್ಯಾ !
ತರ್ಕ ತರ್ಕಿಸಲರಿಯದೆ ಮೂಗುವಟ್ಟಿದ್ದಿತಯ್ಯಾ !
ಆಗಮ ಹೆರತೊಲಗಿ ಅಗಲಿದ್ದಿತಯ್ಯಾ !
ನಮ್ಮ ಕೂಡಲಸಂಗಯ್ಯನು
ಮಾದಾರ ಚೆನ್ನಯ್ಯನ ಮನೆಯಲುಂಡ ಕಾರಣ.
Udaya madhyahna sandhya kaalava
ಉದಯ ಮಧ್ಯಾಹ್ನ ಸಂಧ್ಯಾಕಾಲವ ನೋಡಿ
ಮಾಡುವ ಕರ್ಮಿ ನೀ ಕೇಳಾ;
ಉದಯವೆಂದೇನೊ ಶರಣಂಗೆ
ಮಧ್ಯಾಹ್ನವೆಂದೇನೊ ಶರಣಂಗೆ
ಅಸ್ತಮಾನವೆಂದೇನೊ ಶರಣಂಗೆ
ಮಹಾಮೇರುವಿನ ಮರೆಯಲ್ಲಿರ್ದು
ತಮ್ಮ ನೆಳಲನರಸುವ ಭಾವಭ್ರಮಿತರ ಮೆಚ್ಚ
ನಮ್ಮ ಕೂಡಲಸಂಗಮದೇವರು
Enage nimma nenahaadaga udaya
ಎನಗೆ ನಿಮ್ಮ ನೆನಹಾದಾಗ ಉದಯ
ಎನಗೆ ನಿಮ್ಮ ಮರಹಾದಾಗ ಅಸ್ತಮಾನ
ಎನಗೆ ನಿಮ್ಮ ನೆನಹವೆ ಜೀವನ
ಎನಗೆ ನಿಮ್ಮ ನೆನಹವೆ ಪ್ರಾಣ ಕಾಣಾ ತಂದೆ
ಸ್ವಾಮಿ ಎನ್ನ ಹೃದಯದಲ್ಲಿ ನಿಮ್ಮ ಚರಣದುಂಡಿಗೆಯನೊತ್ತಯ್ಯಾ
ವದನದಲಿ ಷಡಕ್ಷರಿಯ ಬರೆಯಯ್ಯಾ ಕೂಡಲಸಂಗಮದೇವಾ
Friday, June 15, 2018
Sutradhaari manada mailigeya
ಸೂತ್ರಧಾರಿ ಮನದ ಮೈಲಿಗೆಯ ಕಳೆಯಬಂದನಯ್ಯಾ ಮಡಿವಾಳನು.
ಎನ್ನ ಕಾಯದ ಮೈಲಿಗೆಯ ತಂದು ತನ್ನ ಮುಂದೆ ಇರಿಸಿದೆಡೆ
ಸಮತೆಯೆಂಬ ಕೂಪತೋಹಿನಲ್ಲಿ ಅದ್ದಿ, ಕಟ್ಟಿ ಹಿಳಿದನಯ್ಯಾ.
ಪಂಚೇಂದ್ರಿಯವರ್ಗಂಗಳ ಜ್ಞಾನವೆಂಬ ನಿರ್ಮಲಜಲದಲ್ಲಿ
ಅಲುಬಿ ಸೆಳೆದನಯ್ಯಾ.
ರವಿಶಶಿಶಿಖಿಯ ತೇಜದಲ್ಲಿ ಆರಿಸಿದನು,
ಚತುರ್ದಶ ಷೋಡಶವೆಂಬ ಘಳಿಗೆಯ ಮಾಡಿದನು.
ಸಮಾಧಾನವೆಂಬ ಅಡ್ಡೆಯ ಮೇಲಿರಿಸಿ ಸಮಗುಣವೆಂಬ
ಕೊಡತಿಯಲ್ಲಿ ಘಟ್ಟಿಸಿದನು.
ಹರಿಯಿತ್ತಯ್ಯಾ ಸೆರಗು ಮೂರಾಗಿ.
ಆ ಮೂರರಿವೆಯ ಕೊಟ್ಟನಯ್ಯಾ, ಎನ್ನ ಕೈಯಲ್ಲಿ,
ಆ ಅರಿವೆಯ ಗುರುವಿಂಗೊಂದ ಕೊಟ್ಟೆನು,
ಲಿಂಗಕ್ಕೊಂದ ಕೊಟ್ಟೆನು, ಜಂಗಮಕ್ಕೊಂದ ಕೊಟ್ಟೆನು.
ಎನಗೆ ಕೊಟ್ಟ ಮೂರರಿವೆಯನೂ
ಒಂದುಮಾಡಿ
ಹೊದೆದುಕೊಂಡು ನಿಶ್ಚಿಂತನಾಗಿ,
ಮಡಿವಾಳನ ಕೃಪೆಯಿಂದಲಾನು ಬದುಕಿದೆನು
ಕಾಣಾ, ಕೂಡಲಸಂಗಮದೇವಾ.
Saturday, May 19, 2018
PuNya paapavemba
ಪುಣ್ಯ ಪಾಪವೆಂಬ ಉಭಯ ಕರ್ಮವನಾರು ಬಲ್ಲರಯ್ಯಾ ? ಇವನಾರುಂಬರು !
ಕಾಯ ತಾನುಂಬಡೆ ಕಾಯ ತಾ ಮಣ್ಣು
ಜೀವ ತಾನುಂಬಡೆ ಜೀವ ತಾ ಬಯಲು
ಈ ಉಭಯ ನಿರ್ಣಯವ ಕೂಡಲಸಂಗಮದೇವಾ ನಿಮ್ಮ ಶರಣ ಬಲ್ಲ