Links

Friday, August 3, 2018

Kere haLLa bhavigaLu

ಕೆರೆ ಹಳ್ಳ ಭಾವಿಗಳು ಮೈದೆಗೆದರೆ
ಗುಳ್ಳೆ, ಗೊರಚೆ, ಚಿಪ್ಪು ಕಾಣಬಹವು!
ವಾರಿಧಿ ಮೈದೆಗೆದರೆ
ರತ್ನ ಮುತ್ತುಗಳು ಕಾಣಬಹವು!
ಕೂಡಲಸಂಗನ ಶರಣರು
ಮನದೆರೆದು ಮಾತನಾಡಿದರೆ
ಲಿಂಗವೇ ಕಾಣಬಹುದು!

Wednesday, July 11, 2018

Muthu udakadalagadu


ಮುತ್ತು ಉದಕದಲಾಗದು,
ಉದಕ ಮುತ್ತಿನೊಲಾಗದು,
ತತ್ತ್ವಘಟಿಸಿದ ಸುಮುಹೂರ್ತದಲಲ್ಲದೆ.
ಚಿತ್ತವೇದ್ಯವಾಗದು ಸದ್ಗುರುವಿನ ಕರುಣಕಲ್ಲದೆ,
ಕರ್ತೃ ಕೂಡಲಸಂಗಮದೇವರ
ಒಲವಿನ ದಯದ ಚಿತ್ತವಿಡಿದಂಗಲ್ಲದೆ
ಶಿವತತ್ತ್ವ ಸಾಹಿತ್ಯವಾಗದು.

Saturday, June 16, 2018

baDa paShu pankadalli biddare

ಬಡಪಶು ಪಂಕದಲ್ಲಿ ಬಿದ್ದರೆ ಕಾಲ ಬಡಿವುದಲ್ಲದೆ ಬೇರೆ ಗತಿಯುಂಟೆ ? ಶಿವ ಶಿವಾ! ಹೋದಹೆ ಹೋದಹೆನಯ್ಯ! ನಿಮ್ಮ ಮನದೆತ್ತಲೆನ್ನ ತೆಗೆಯಯ್ಯ                ಪಶುವಾನು ಪಶುಪತಿ ನೀನು ತುಡುಗುಣಿಯೆಂದೆನ್ನ ಹಿಡಿದು ಬಡಿಯದ ಮುನ್ನ ಒಡೆಯ ನಿಮ್ಮ ಬಯ್ಯದಂತೆ ಮಾಡು ಕೂಡಲಸಂಗಮದೇವ
                           

Matimandabagu kaaNade iddanayya

ಮತಿಮಂದನಾಗಿ ಗತಿಯ ಕಾಣದೆ ಇದ್ದೆನಯ್ಯಾ
ಹುಟ್ಟುಗುರುಡನ ಕೈಯ ಕೋಲ ಕೊಟ್ಟು ನಡೆಸುವಂತೆ ನಡೆಸಯ್ಯಾ ಎನ್ನ               ನಿಮ್ಮ ಅಚ್ಚ ಶರಣರ ಒಕ್ಕುದ ಮಿಕ್ಕುದ ನಚ್ಚಿಸು ಮಚ್ಚಿಸು ಕೂಡಲಸಂಗಮದೇವಾ

                           

Kaage ondaguLa kanDaDe

ಕಾಗೆ ಒಂದಗುಳ ಕಂಡಡೆ ಕರೆಯದೆ ತನ್ನ ಬಳಗವನು
ಕೋಳಿ ಒಂದು ಕುಟುಕ ಕಂಡಡೆ ಕೂಗಿ ಕರೆಯದೆ ತನ್ನ ಕುಲವನೆಲ್ಲವ
ಶಿವಭಕ್ತನಾಗಿ ಭಕ್ತಿಪಕ್ಷವಿಲ್ಲದಿದ್ದಡೆ ಕಾಗೆ ಕೋಳಿಂದ ಕರಕಷ್ಟ ಕೂಡಲಸಂಗಮದೇವಾ

Japatala nitya nemavenagupadesha

ಜಪತಪ ನಿತ್ಯನೇಮವೆನಗುಪದೇಶ
ನಿಮ್ಮ ನಾಮವೆನಗೆ ಮಂತ್ರ
ಶಿವನಾಮವೆನಗೆ ತಂತ್ರ
ಕೂಡಲಸಂಗಮದೇವಯ್ಯಾ  ನಿಮ್ಮ ನಾಮವೆನಗೆ ಕಾಮಧೇನು

Veda naDanaDugithu


ವೇದ ನಡನಡುಗಿತ್ತು, ಶಾಸ್ತ್ರವಗಲಿ ಕೆಲಕ್ಕೆ ಸಾರಿದ್ದಿತಯ್ಯಾ !
ತರ್ಕ ತರ್ಕಿಸಲರಿಯದೆ ಮೂಗುವಟ್ಟಿದ್ದಿತಯ್ಯಾ !
ಆಗಮ ಹೆರತೊಲಗಿ ಅಗಲಿದ್ದಿತಯ್ಯಾ !
ನಮ್ಮ ಕೂಡಲಸಂಗಯ್ಯನು
ಮಾದಾರ ಚೆನ್ನಯ್ಯನ ಮನೆಯಲುಂಡ ಕಾರಣ.